ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹಾಗೂ ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಕಿರಿಯ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವು ಶುಕ್ರವಾರ ಅದ್ಧೂರಿಯಾಗಿ ನಡೆಯಿತು. ದೇಶ, ವಿದೇಶಗಳಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಅತಿಥಿಗಳು ಮದುವೆ ಸಮಾರಂಭದಲ್ಲಿ ಭಾಗೀ ಆಗಿದ್ದರು. ರಾಜಕೀಯ ಕ್ಷೇತ್ರದ ಹಲವು ಗಣ್ಯರು ಆಗಮಿಸಿ ನವ ದಂಪತಿಗೆ ಆಶೀರ್ವದಿಸಿದರು. ಶನಿವಾರ ಶುಭಾಶೀರ್ವಾದ ಕಾರ್ಯಕ್ರಮ ನಡೆದಿದ್ದು, ಇದರಲ್ಲಿ ಖುದ್ದು ಪ್ರಧಾನಿ ನರೇಂದ್ರ ಮೋದಿ ಆಗಮಿಸಿ, ನವ ದಂಪತಿಗೆ ಶುಭ ಕೋರಿದ್ರು.
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಸಮಾರಂಭವು ಅದ್ಧೂರಿಯಾಗಿ ಭಾರತೀಯ ಪರಂಪರೆಯನ್ನು ಪ್ರತಿಬಿಂಬಿಸಿ ಮಾಡಲಾಗಿದ್ದು, ಈ ಸಮಾರಂಭವು ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುವಂತೆ ಮಾಡಿತು, ಅದ್ಧೂರಿ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದ ಬಾಲಿವುಡ್ ನಟ ಅನುಪಮ್ ಖೇರ್ ಅವರು ಈ ಸುಂದರ ‘ಶುಭ್ ಆಶೀರ್ವಾದ್’ ಕಾರ್ಯಕ್ರಮದ ಕೆಲವು ಝಲಕ್ಗಳನ್ನು ಸಾಮಾಜಿ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ನ ಶುಭ್ ಆಶೀರ್ವಾದ್ ಸಮಾರಂಭದಲ್ಲಿ ಭಾಗವಹಿಸಿದ ಬಾಲಿವುಡ್ ನಟ ಅನುಪಮ್ ಖೇರ್, ಸಮಾರಂಭದ ಕೆಲವು ಮೋಡಿಮಾಡುವ ಗ್ಲಿಂಪ್ಗಳನ್ನು ಹಂಚಿಕೊಂಡಿದ್ದು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅತಿಥಿಗಳಿಗೆ ಅಂಬಾನಿ ಕುಟುಂಬ ವೈದಿಕ ಮತ್ತು ಸನಾತನ ಸಂಪ್ರದಾಯಗಳನ್ನು ಪ್ರದರ್ಶಿಸಿದ ರೀತಿಯನ್ನು ಶ್ಲಾಘಿಸಿದ್ದಾರೆ. ಇದಲ್ಲದೆ, ಸಂಪ್ರದಾಯಗಳು ಮತ್ತು ಕೌಟುಂಬಿಕ ಮೌಲ್ಯಗಳ ಕುರಿತು ಮುಖೇಶ್ ಅಂಬಾನಿಯವರ ಭಾಷಣವನ್ನು ಅನುಪಮ್ ಖೇರ್ ಶ್ಲಾಘಿಸಿದರು.