- ಅಂಡಮಾನ್-ನಿಕೋಬಾರ್ನ ದ್ವೀಪದಲ್ಲಿ ಭೂಕಂಪನ
- ರಾಜ್ಯಗಳಲ್ಲಿ ಹಲವು ಕಡೆ ಮಳೆಯಿಂದ ಜನಜೀವನ ಅಸ್ತವ್ಯಸ್ತ
- ಭೂಕಂಪನದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ
ಅಂಡಮಾನ್-ನಿಕೋಬಾರ್ನ ದ್ವೀಪದಲ್ಲಿ ಭೂಮಿ ಕಂಪಿಸಿದೆ. ಕಂಪನದ ತೀವ್ರತೆ ಶೇಕಡ 4.3 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಹಲವೆಡೆ ಮಳೆಯ ಆರ್ಭಟ ಜೋರಾಗಿದೆ. ಅದೇ ರೀತಿ ರಾಜ್ಯಗಳಲ್ಲಿ ಹಲವು ಕಡೆ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಸಂಚಾರ ಅಸ್ತವ್ಯಸ್ತಗೊಂಡು ಜನರು ಪರದಾಡುವಂತಾಗಿದೆ.
ಇದೀಗ ಶುಕ್ರವಾರ ರಾತ್ರಿ 11.30 ರ ಸಮಯದಲ್ಲಿ ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಸಾಗರದ 10 ಕಿ ಮೀ ಆಳದಷ್ಟು ಭೂಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪನದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ವರ್ಷದಲ್ಲಿ ಹಲವು ಭಾರೀ ಭೂಮಿ ಕಂಪಿಸಿದೆ. ಈ ವರ್ಷದಲ್ಲಿ ರಾಜಧಾನಿ ಸೇರಿದಂತೆ ಉತ್ತರದ ಹಲವು ರಾಜ್ಯಗಳಲ್ಲಿ ಇದೇ ರೀತಿ ಭೂಮಿ ಕಂಪಿಸಿತ್ತು.