- ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ನಾಯ್ಡು ಅಧಿಕಾರ ಸ್ವೀಕಾರ
- ಡಿಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಪವನ್ ಕಲ್ಯಾಣ
ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರಿಸಿದರು. ಗನ್ನವರಂ ವಿಮಾನ ನಿಲ್ದಾಣ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್ನಲ್ಲಿ ಸಮಾರಂಭ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ನಾಯ್ಡು ಅವರೊಂದಿಗೆ ಅವರ ಮಗ ನಾರಾ ಲೋಕೇಶ್, ಜನಸೇನಾ ಮುಖಂಡ ಪವನ್ ಕಲ್ಯಾಣ್, ಎನ್. ಮನೋಹರ್ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನಸಭೆಯಲ್ಲಿ ಎನ್ಡಿಯ ನಾಯಕರಾಗಿ ಚಂದ್ರಬಾಬು ನಾಯ್ಡು, ಜನಸೇನಾ ಪಕ್ಷದ ನಾಯಕರಾಗಿ ಪವನ್ ಕಲ್ಯಾಣ್, ಎನ್. ಮನೋಹನ್ ಕೂಡ ಸಚಿವರಾಗಿ, ಒಟ್ಟು 23 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ವ್ಯಾಪಕ ಭದ್ರತೆ ಕಲ್ಪಿಸಲಾಗಿದೆ. ಮೂರು ಪಕ್ಷಗಳ ಒಂದಕ್ಕಿಂತ ಹೆಚ್ಚು ಲಕ್ಷ ಕಾರ್ಯಕರ್ತರು ಮತ್ತು ಕೇಡರ್ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.