ಆಂಧ್ರಪ್ರದೇಶದ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಚುನಾವಣೋತ್ತರ ಸಮೀಕ್ಷೆಯಂತೆಯೇ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (TDP) ಭರ್ಜರಿ ಜಯ ಸಾಧಿಸಿದೆ. ಅವರ ತೆಲುಗು ದೇಶಂ ಪಕ್ಷ (ಟಿಡಿಪಿ) 2024ರ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗಳು ಮತ್ತು ಲೋಕಸಭೆ ಚುನಾವಣೆಗಳೆರಡರಲ್ಲೂ ಮುನ್ನಡೆ ಸಾಧಿಸಿದೆ. ಜೂನ್ 9ರಂದು ಅಮರಾವತಿಯಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ.
“ಎಲ್ಲಾ ಎಕ್ಸಿಟ್ ಪೋಲ್ಗಳು ಎನ್ಡಿಎ ಗೆಲುವನ್ನು ಸ್ಪಷ್ಟವಾಗಿ ಸೂಚಿಸಿವೆ. ಈ ಮೈತ್ರಿಯು ಕೇಂದ್ರ ಮತ್ತು ರಾಜ್ಯದಲ್ಲಿ ಎರಡೂ ಸರ್ಕಾರಗಳನ್ನು ರಚಿಸಲಿದೆ” ಎಂದು ಎಕ್ಸಿಟ್ ಪೋಲ್ ಸಮೀಕ್ಷೆಗಳು ಬಂದ ನಂತರ ಚಂದ್ರಬಾಬು ನಾಯ್ಡು ಹೇಳಿದ್ದರು.