ಶಾಸಕ ಮುನಿರತ್ನ ಅವರ ವಿರುದ್ಧ ಮತ್ತೊಂದು FIR ದಾಖಲಾಗಿದೆ. ಶಾಸಕ ಮುನಿರತ್ನ ಅವರ ರಾಜಕೀಯ ಜೀವನಕ್ಕೆ ಮುಳ್ಳಾಗಿರುವ ನಕಲಿ ಮತದಾರರ ಗುರುತಿನ ಚೀಟಿ ಪ್ರಕರಣ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ಇತ್ತೀಚಿಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿರುವ ಮುನಿರತ್ನ ಅವರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ.
ಶಾಸಕ ಮುನಿರತ್ನ ಮೇಲೆ ದಿನಗೂಲಿ ಕೆಲಸ ಮಾಡುವವರ ಮೇಲೆ ದೌರ್ಜನ್ಯ ಮಾಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂನಲ್ಲಿ ಸುಮಾರು 50 ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಏಕಾಏಕಿ ಎಲ್ಲರ ಮನೆಯನ್ನು ನೆಲಸಮ ಮಾಡಿದ್ದಾರೆ ಎಂದು ಗಂಭೀರ ಆರೋಪದ ದೂರು ನೀಡಲಾಗಿದೆ.
ವಸಂತ್ ಕುಮಾರ್, ಚನ್ನಕೇಶವ, ನವೀನ್, ರಾಮ , ಕಿಟ್ಟಿ , ಗಂಗಾ ಎಂಬುವವರು ಬಂದು ಮನೆ ನೆಲಸಮ ಮಾಡಿಸಿದ್ದಾರೆ. ಒಂದೊಂದು ಮನೆಯಲ್ಲಿ ಕೂಡಿಟಿದ್ದ 20-70 ಸಾವಿರ ಹಣ 30 ಗ್ರಾಂ ಚಿನ್ನಾಭರಣ ಮಣ್ಣು ಪಾಲಾಗಿದೆಯೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ರಾಜಕೀಯ ಪ್ರಭಾವ ಬಳಸಿ ಕೂಲಿ ಕಾರ್ಮಿಕರ ಮೇಲೆ ದರ್ಪ ಶಾಸಕ ಮುನಿರತ್ನ ತಮ್ಮ ರಾಜಕೀಯ ಪ್ರಭಾವ ಬಳಸಿ ಕೂಲಿ ಕಾರ್ಮಿಕರ ಮೇಲೆ ದರ್ಪ ತೋರಿದ್ದಾರೆ ಎಂದು ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc