ಪ್ರವಾಹ ಪೀಡಿತ ಅಸ್ಸಾಂ ಜನರೊಂದಿಗೆ ನಾನು ನಿಲ್ಲುತ್ತೇನೆ, ಲೋಕಸಭೆಯಲ್ಲಿ ಅಸ್ಸಾಂ ಜನರ ಪರವಾಗಿ ನಾನು ಧ್ವನಿಯಾಗುತ್ತೇನೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇಂದು ಅಸ್ಸಾಂನ ಕಚ್ಚಾರ್ ಜಿಲ್ಲೆಯ ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿದ ರಾಹುಲ್ ಗಾಂಧಿ ಸಂತ್ರಸ್ತರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಭೀಕರ ಪ್ರವಾಹಕ್ಕೆ ಈವರೆಗೂ 60 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, 24 ಲಕ್ಷ ಮಂದಿ ಸಂಕಷ್ಟದಲ್ಲಿದ್ದಾರೆ, 53 ಸಾವಿರ ಮಂದಿ ಸ್ಥಳಾಂತರಗೊಂಡಿದ್ದಾರೆ. ಪ್ರವಾಹ ಪೀಡಿತ ಸ್ಥಳಗಳಿಗೆ ಎಲ್ಲಾ ರೀತಿಯ ನೆರವನ್ನು ಕೂಡಲೇ ಕೇಂದ್ರ ಸರ್ಕಾರ ಒದಗಿಸಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.