ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನುರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಶೋಭನ, ಕರಣ: ಶಕುನಿ, ಸೂರ್ಯೋದಯ ಬೆಳಗ್ಗೆ 06 ಗಂಟೆ 42 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:56 ರಿಂದ ಮಧ್ಯಾಹ್ನ 12:21ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:11 ರಿಂದ ಸಂಜೆ 04:35 ರವರೆಗೆ, ಗುಳಿಕ ಕಾಲ ಬೆಳಿಗ್ಗೆ 08:07 ರಿಂದ 09:32 ರವರೆಗೆ.
ಮೇಷ ರಾಶಿ: ಹುರುಳಿಲ್ಲದ ಮಾತಿಗೆ ಕಿವಿಕೊಡುವುದು ಬೇಡ. ನಿಮ್ಮ ವರ್ತನೆಯನ್ನು ಬೇರೆಯವರ ಮೂಲಕದಿಂದ ತಿದ್ದಿಕೊಳ್ಳುವಿರಿ. ಕಛೇರಿಯ ಕೆಲಸದಲ್ಲಿ ನಿಮ್ಮ ಗುಂಪಿನಿಂದ ತಪ್ಪಾಗದಂತೆ ಪರೀಕ್ಷಿಸಿ. ನಿಮಗೆ ಗೊತ್ತಾಗದಂತೆ ಖರ್ಚು ಅಧಿಕವಾಗುವುದು. ಇಂದು ನಿಮ್ಮ ರಪ್ತು ಅಡೆತಡೆಗಳಿಲ್ಲದೇ ನಡೆಸುವಿರಿ. ದಾಖಲೆಗಳು ಸರಿಯಿದ್ದಾಗ ಅನ್ಯ ಯೋಜನೆ ಬೇಡ. ಸ್ತ್ರೀಯರಿಗೆ ಕೆಲವು ಲಾಭಗಳು ಆಗಬಹುದು. ವಾಹನ ಖರೀದಿಗೆ ದಾಖಲೆಗಳನ್ನು ತಯಾರಿಸಿಕೊಳ್ಳುವಿರಿ. ಇಂದು ನಿಮ್ಮ ತಲೆಯಲ್ಲಿ ಅಪೂರ್ಣ ಕಾರ್ಯಗಳೇ ತುಂಬಿರುವುದು. ನಿಮ್ಮ ಮಗನ ಮೇಲೆ ಸಂಪತ್ತಿನ ದೂರುವಿರಿ. ತುರ್ತು ಕಾರ್ಯಕ್ಕಾಗಿ ಮನೆಯಿಂದ ಬೇಗ ಹೊರಡಬೇಖಾಗುವುದು. ಹೇಳಿದ ಕೆಲಸಗಳು ಸಮಯಕ್ಕೆ ಆಗಿಲ್ಲ ಎಂದು ನೌಕರರ ಮೇಲೆ ಕೋಪಗೊಳ್ಳುವಿರಿ. ಹೋರಾಟದಿಂದ ಪಡೆಯುವ ಮನಸ್ಥಿತಿ ನಿಮ್ಮದಾಗಬಹುದು. ನಿಮ್ಮ ಪ್ರಭಾವವನ್ನು ಯಾರಾದರೂ ಬಳಸಿಕೊಳ್ಳಬಹುದು.
ವೃಷಭ ರಾಶಿ: ತಿರಸ್ಕಾರದ ಸ್ಥಳದಲ್ಲಿಯೇ ಪುರಸ್ಕಾರ ಪಡೆಯುವ ಹಠವಿರುವುದು. ನೀವು ಆರಿಸಿಕೊಂಡ ಮಾರ್ಗವು ಹಲವು ದಿನಗಳ ಅನಂತರ ಬೇಡವೆನಿಸಬಹುದು. ಕೆಲಸದ ವಿಷಯದಲ್ಲಿ ನೀವು ಯಾರ ಮಾತನ್ನೂ ಕೇಳುವುದಿಲ್ಲ. ನಿಮ್ಮ ಕುಟುಂಬದ ಜೊತೆ ಇಂದು ಸಮಯವನ್ನು ಕಳೆಯಲು ಸಾಧ್ಯವಾಗುವುದು. ನಿಮ್ಮ ಇಂದಿನ ಆದಾಯವು ಮಧ್ಯಮಕ್ಕಿಂತ ಚೆನ್ನಾಗಿ ಇರುವುದು. ಇಂದು ನೀವು ಅಚಾತುರ್ಯದಿಂದ ನಿರ್ಧಾರ ತೆಗೆದುಕೊಳ್ಳಬೇಡಿ. ಒಂಟಿತನವು ನಿಮ್ಮನ್ನು ಆವರಿಸಬಹುದು. ಹಿಂದಿನಿಂದ ಮಾತನಾಡಿಕೊಳ್ಳುವರಿಗೆ ಬೆಲೆಯನ್ನು ಕೊಡುವುದಿಲ್ಲ. ಇಂದು ನಿಮಗಾದ ವಿಶ್ವಾಸದ್ರೋಹದಿಂದ ಎಲ್ಲರ ಮೇಲೆ ಅಸಮಾಧಾನ ತೋರುವಿರಿ. ಖರೀದಿಯು ನಿಮ್ಮ ಲೆಕ್ಕಾಚಾರವನ್ನು ಮೀರುವುದು. ಎಲ್ಲದಕ್ಕೂ ದೈವವನ್ನು ದೂರುತ್ತ ಆಲಸ್ಯದಿಂದ ಇರುವುದು ಬೇಡ. ಬಂಧುಗಳ ವಿಚಾರದಲ್ಲಿ ನಿಮಗೆ ಪೂರ್ಣವಾದ ನಂಬಿಕೆ ಇರದು. ಯಾವುದನ್ನೂ ಉಳಿಸಿಕೊಂಡು ಹೋಗುವುದನ್ನು ಕಲಿಯಬೇಕು.
ಮಿಥುನ ರಾಶಿ: ನಿಮ್ಮ ಹಿಂಜರಿಕೆಯಿಂದ ನಿಮಗೇ ನಷ್ಟ. ಕಾರ್ಯದ ಒತ್ತಡದಿಂದ ಆರೋಗ್ಯವು ಹದ ತಪ್ಪಬಹುದು. ಸರ್ಕಾರದ ಅಧಿಕಾರಿಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ವ್ಯಾಪಾರಸ್ಥರು ಅಧಿಕ ಲಾಭವನ್ನು ಗಳಿಸುವರು. ಮನೆಯಲ್ಲಿ ವಾತಾವರಣ ಚೆನ್ನಾಗಿರುವುದಿಲ್ಲ. ಸರ್ಕಾರದ ಕೆಲಸಕ್ಕೆ ತೊಂದರೆಯಾಗುವುದು. ಯಾರಾದರೂ ನಿಮಗೆ ಹೊಸ ದಿಕ್ಕನ್ನು ಪರಿಚಯಿಸಬಹುದು. ಯಾರದೋ ಒತ್ತಾಯಕ್ಕಾಗಿ ಪ್ರಯಾಣ ಮಾಡಬೇಕಾದೀತು. ಪತ್ನಿಯು ನಿಮ್ಮನ್ನು ದೂಷಿಸಬಹುದು. ನಿಮ್ಮ ಪ್ರಾಮಾಣಿಕತೆಗೆ ಫಲವು ಲಭಿಸಿ, ಸಂತಸವಾಗುವುದು. ಖಾಸಗಿಯ ಸಮಾರಂಭದಲ್ಲಿ ಭಾಗವಹಿಸುವಿರಿ. ಇಂದು ನಿಮಗೆ ಒತ್ತಡದ ಕೆಲಸವು ಬಂದು ಮನೆಯ ಕೆಲಸವು ಮರೆತುಹೋದೀತು. ಯಾರಿಂದಲಾದರೂ ದೈನ್ಯತೆಯನ್ನು ಪಡೆದುಕೊಳ್ಳುವುದು ಬೇಡ. ಅವಕಾಶವನ್ನು ಬಿಟ್ಟು ನೀವು ದೊಡ್ಡವರಾಗುವುದು ಬೇಡ.
ಕರ್ಕಾಟಕ ರಾಶಿ: ಯಾವುದನ್ನೂ ಅತಿಯಾಗಿ ತೆಗೆಸುಕೊಳ್ಳುವುದು ಬೇಡ. ಇಂದು ನಿಮ್ಮ ಜಾಣತನವೇ ಮುಳುವಾಗಬಹುದು. ಸಂಕೀರ್ಣವಾದ ಜೀವನವನ್ನು ಆಶಾವಾದದಿಂದ ಸರಳವಾಗಬಹುದು. ಕೆಲಸದ ನಿಮಿತ್ತ ಪ್ರಯಾಣ ಮಾಡಬೇಕಾಗುವುದು. ನಿಮ್ಮ ಈ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ಕಛೇರಿಯಲ್ಲಿ ಎಲ್ಲ ಕೆಲಸಕ್ಕೂ ನಿಮ್ಮನ್ನೇ ದೂಡಬಹುದು. ಭೂಮಿಯ ವ್ಯವಹಾರವನ್ನು ಮಾಡಲು ಬಹಳ ಉತ್ಸಾವಿರಲಿದೆ. ಕಛೇರಿಯಲ್ಲಿ ನಿಮ್ಮ ದಾಖಲೆಗಳು ಕಾಣಿಸದೇ ಹೋಗಬಹುದು. ನಿಮಗೆ ಬೇಡದ ವಸ್ತುವಾದರೂ ಇಂದು ಯಾರಿಗೂ ಕೊಡುವುದು ಬೇಡ. ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳುವ ಪ್ರಯತ್ನ ಮಾಡುವಿರಿ. ಮಕ್ಕಳ ಶುಭವಾರ್ತೆಯು ಇರಲಿದೆ. ಒಗಟಾದ ಮಾತುಗಳು ಇಂದು ಹೆಚ್ಚು ಆಡುವಿರಿ. ಕೆಲವನ್ನು ಬಿಟ್ಟುಕೊಡುವುದು ಅನಿವಾರ್ಯವಾಗಬಹುದು. ಸ್ನೇಹದಲ್ಲಿ ಕಠೋರ ಮಾತುಗಳು ಕೇಳಿಸುವುದು. ನೀವು ಜಾಣ್ಮೆಯಿಂದ ವರ್ತಿಸಬೇಕಾದೀತು.
ಸಿಂಹ ರಾಶಿ: ಕ್ಲಿಷ್ಟದ ಸಂದರ್ಭಗಳನ್ನು ಎದುರಿಸಿದಷ್ಟು ಗಟ್ಟಿಯಾಗಬಹುದು. ನಿಮಗೆ ಅತ್ಮ ಸ್ಥೈರ್ಯದ ಕೊರತೆ ಬಹುವಾಗಿ ಕಾಡುವುದು. ಕೆಲಸದಲ್ಲಿ ಒತ್ತಡ ಹೆಚ್ಚಾಗಬಹುದು. ಸಂಗಾತಿಯ ಜೊತೆ ನಿಮ್ಮ ಸಂಬಂಧವು ಹಿಂದಿಗಿಂತ ಗಟ್ಟಿಯಾಗುವುದು. ನೀವು ಇಂದು ದೊಡ್ಡ ಖರೀದಿಯನ್ನು ಮಾಡಲು ತೀರ್ಮಾನಿಸಿದ್ದೀರಿ. ಸಾಲ ಕೊಟ್ಟ ಹಣವು ನಿಮಗೆ ಮರಳಿಬರುವುದು. ನಿಮಗೆ ಸಂಸ್ಥೆಯನ್ನು ಮುನ್ನಡೆಸುವ ಹೊಣೆಗಾರಿಕೆ ಸಿಗಲಿದೆ. ನಿಮ್ಮ ಮೇಲಿನ ಆರೋಪಗಳನ್ನು ಕಾರ್ಯದ ಮೂಲಕ ತಳ್ಳಿಹಾಕುವಿರಿ. ನಿಮ್ಮ ಕೆಲಸಕ್ಕೆ ಕುಟುಂಬ ಬೆಂಬಲವು ಪೂರ್ಣವಾಗಿ ಸಿಗದು. ವ್ಯಾಪಾರದಲ್ಲಿ ಅಲ್ಪ ಲಾಭಕ್ಕೆ ತೃಪ್ತಿ ಇರಲಿ. ಇಂದು ಎಲ್ಲರ ಜೊತೆ ಬೆರೆಯಬೇಕಾದೀತು. ನೀವು ಅಧಿಕಾರವನ್ನು ದುರುಪಯೋಗದ ಮಾಡಿಕೊಳ್ಳುವಿರಿ. ಮಾತುನ್ನು ಕೇಳಿಸಿಕೊಳ್ಳುವ ಸಮಾಧಾನ ಇರಲಿ. ಕೆಲವು ಸಾಲಬಾಧೆಯಿಂದ ಮುಕ್ತಿ ಸಿಗುವುದು. ಕೇಳಿದಷ್ಟೇ ವಿಚಾರಕ್ಕೆ ಉತ್ತರಿಸಿದರೆ ಸಾಕು.
ಕನ್ಯಾ ರಾಶಿ: ಒಪ್ಪಂದಗಳನ್ನು ಸಡಿಲಾಗಬಹುದು. ಕುಳಿತು ಮಾತನಾಡಿದರೆ ಉತ್ತಮ. ನೀವು ಕಛೇರಿಯ ಕೆಲಸದಲ್ಲಿ ಅವಸರದ ನಿರ್ಧಾರವನ್ನು ತೆಗದುಕೊಳ್ಳುವುದು ಬೇಡ. ಇಂದು ವಿದ್ಯಾರ್ಥಿಗಳಿಗೆ ಪ್ರಶಂಸೆ ಸಿಗುವ ದಿನ. ಪರೀಕ್ಷೆಯ ಫಲಿತಾಂಶವು ನಿಮಗೆ ಸಂತೋಷವನ್ನು ಕೊಡುವುದು. ನೀವು ಉದ್ಯೋಗವನ್ನು ಬದಲಾಯಿಸಲು ಕಷ್ಟವಾದೀತು. ಮಕ್ಕಳಿಂದ ನಿಮಗೆ ತೊಂದರೆ ಆಗಬಹುದು. ಮನಸ್ಸಿನ ನಿಯಂತ್ರಣದಲ್ಲಿ ನಿಮಗೆ ಕಷ್ಟವಾದೀತು. ಕುಟುಂಬದ ತೊಡಕುಗಳನ್ನು ಸೂಕ್ಷ್ಮವಾಗಿ ಪರಿಹರಿಸಿಕೊಳ್ಳಿ. ಯಾರ ಸ್ನೇಹಕ್ಕೂ ಮನಸ್ಸು ಒಲ್ಲದು. ಇನ್ನೊಬ್ಬರಿಗೆ ಸಹಾಯವನ್ನು ಮಾಡುವ ಆಸೆಯು ಇದ್ದರೂ, ನಿಮಗೆ ಅಂತಹ ಘಟನೆ ಸಿಗದೆಹೋಗುವುದು. ನಿಮ್ಮ ಅಮೂಲ್ಯ ವಸ್ತುನ್ನು ಕಳೆದುಕೊಳ್ಳುವಿರಿ. ಇಂದಿನ ವ್ಯವಹಾರವನ್ನು ಸಂಗಾತಿಗೆ ಬಿಟ್ಟುಕೊಡುವಿರಿ. ಇಂದು ನಿಮ್ಮ ಜೀವನಕ್ಕೆ ಸಂಬಂಧಿಸಿದ ಕೆಲವು ನಿರ್ಧಾರವನ್ನು ತೆಗೆದುಕೊಳ್ಳಬೇಕಾದೀತು. ಹೇಳಿಕೊಳ್ಳುವಷ್ಟು ಸುಲಭವಾಗಿ ಯಾವುದನ್ನೂ ಬದಲಿಸಲಾಗದು.