ಹೆಂಡತಿಯ ಕಿರುಕುಳ ತಾಳಲಾರದೆ ಇತ್ತೀಚೆಗೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಅತುಲ್ ಸುಭಾಷ್ ಪತ್ನಿ ಸೇರಿದಂತೆ ಮೂವರು ಆರೋಪಿಗಳನ್ನು ಉತ್ತರಪ್ರದೇಶದ ಅಲಹಾಬಾದ್ ನಲ್ಲಿ ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಹೆಂಡತಿಯ ಕಿರುಕುಳಕ್ಕೆ ಬೇಸತ್ತು ಟಕ್ಕಿ ಅತುಲ್ ಸುಭಾಷ್ ಸುಮಾರು 24 ಪುಟಗಳಷ್ಟು ಕಿರುಕುಳದ ಬಗ್ಗೆ ಡೆತ್ ನೋಟ್ ಅಲ್ಲಿ ಉಲ್ಲೇಖಿಸಿದ್ದರು. ಪತ್ನಿ ತಮಗೆ ನೀಡುತ್ತಿರುವ ಕಿರುಕುಳದ ಬಗ್ಗೆ ಉಲ್ಲೇಖಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಅತುಲ್ ಸುಭಾಷ್ ಪತ್ನಿ ನಿಖಿತಾ ಸಿಂಘಾನಿಯ, ನೀಶಾ ಹಾಗೂ ಅನುರಾಗ್ ಸಿಂಘಾನಿಯ ಅವರನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಕರಣ ಹಿನ್ನೆಲೆ? ಕಳೆದ ಸೋಮವಾರ ಬೆಂಗಳೂರಿನಲ್ಲಿ ಅತುಲ್ ಸುಭಾಷ್ ಎಂಬ ಯುಪಿ ಮೂಲದ ಟೆಕ್ಕಿ ಸೂಸೈಡ್ ಮಾಡಿಕೊಳ್ತಾರೆ. ಅವರು ಸೂಸೈಡ್ಗೂ ಮುನ್ನ 24 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ ಮತ್ತು 90 ನಿಮಿಷದ ವಿಡಿಯೋವನ್ನು ಮಾಡಿದ್ದಾರೆ. ಈ ಹಿನ್ನೆಲೆ ಚೌನ್ಪುರದಲ್ಲಿರುವ ಅತುಲ್ ಸುಭಾಷ್ ಅವರ ಪತ್ನಿಯ ನಿವಾಸದ ಹೊರಗೆ ಪೊಲೀಸರು ನೊಟೀಸ್ ಅಂಟಿಸಿ ಬಂದಿದ್ದರು. ಅದರಲ್ಲಿ ‘ನಿಮ್ಮನ್ನು ವಿಚಾರಣೆ ಮಾಡಲು ಸಮಂಜಸವಾದ ಆಧಾರಗಳಿವೆ. ಮೂರು ದಿನಗಳೊಳಗೆ ಬೆಂಗಳೂರಿನ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಇದೀಗ ಪೊಲೀಸರು ಪತ್ನಿ ನಿಕಿತಾ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ.