ಪಂಚಮಸಾಲಿ ಲಿಂಗಾಯತರಿಗೆ ಯಾವುದೇ ಕಾರಣಕ್ಕೂ ಮೀಸಲಾತಿ ನೀಡಬೇಡಿ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದ್ದಾರೆ.
ಒಂದೆಡೆ ಪಂಚಮಸಾಲಿ ಸಮುದಾಯವನ್ನು 2 ಎ ವರ್ಗಕ್ಕೆ ಸೇರ್ಪಡೆ ಮಾಡಬೇಕು ಎಂದು ಪಂಚಮಸಾಲಿ ಸಮುದಾಯ ಬೆಳಗಾವಿಯಲ್ಲಿ ಹೋರಾಟ ಮಾಡುತ್ತಿದ್ದರೆ ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ಮೀಸಲಾತಿ ನೀಡಬೇಡಿ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.
ನಿನ್ನೆ ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡಿದ್ದಾರೆ. ಇದೀಗ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎ ಗೆ ಸೇರಿಸಬಾರದು ಎಂದು ಮನವಿ ಮಾಡಿದ್ದಾರೆ.