ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಚಾಲಕ ಸಾವನ್ನಪ್ಪಿದ್ದಾನೆ. ಅಪಘಾತದ ವೇಳೆ ಎರಡು ಲಾರಿಗಳು ಹೊತ್ತಿ ಉರಿದ ಘಟನೆ ಬೆಳಗಲ್ ಕ್ರಾಸ್ ಬಳಿಯ NH50ರಲ್ಲಿ ತಡರಾತ್ರಿ ನಡೆದಿದೆ. ಪರಿಣಾಮ ಓರ್ವ ಲಾರಿ ಚಾಲಕ ಸಾವನ್ನಪ್ಪಿದ್ದಾನೆ. ಬಾಗಲಕೋಟೆಯ ಬೆಳಗಲ್ ಕ್ರಾಸ್ ಬಳಿ ಒಂದು ಲಾರಿಗೆ ಇನ್ನೊಂದು ಲಾರಿ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಹಿಂದಿನ ಲಾರಿಯಲ್ಲಿ ಕಾಟನ್ ಇದ್ದ ಕಾರಣ ಬೆಂಕಿ ಹೊತ್ತಿಕೊಂಡಿದೆ.
ಎರಡು ಲಾರಿಗೂ ಬೆಂಕಿ ಆವರಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಓರ್ವ ಲಾರಿ ಚಾಲಕ ಸಾವನ್ನಪ್ಪಿದ್ದಾನೆ. ಒಂದು ಲಾರಿ ರಾಜಸ್ಥಾನ ಮೂಲದ್ದಾಗಿದ್ದು, ಇನ್ನೊಂದು ಲಾರಿ ಮಹಾರಾಷ್ಟ್ರ ಮೂಲದೆಂಬ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವನ್ನಪ್ಪಿದ ಮೃತ ಚಾಲಕನ ಹೆಸರು ಪತ್ತೆಯಾಗಬೇಕಿದೆ. ಸದ್ಯ ಪೊಲೀಸರು ಪರಿಶೀಲನೆಯಲ್ಲಿ ತೊಡಗಿದ್ದು, ತನಿಖೆಯಿಂದ ಹೆಚ್ಚಿನ ಮಾಹಿತಿ ಸಿಗಬೇಕಿದೆ. ಹುನಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.