- ಮನೆ ಮೇಚ್ಛಾವಣಿ ಕುಸಿದು ಅಕ್ಕ – ತಮ್ಮ ಸಾವು
- ಬಾಗಲಕೋಟೆಯ ಕಂದಗಲ್ಲ ಗ್ರಾಮದಲ್ಲಿ ಘಟನೆ ನಡೆದಿದೆ
ಬಾಗಲಕೋಟೆ : ಮನೆ ಮೇಲ್ಛಾವಣಿ ಕುಸಿದು ಅಕ್ಕ – ತಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಾಗಲಕೋಟೆಯ ಕಂದಗಲ್ಲ ಗ್ರಾಮದಲ್ಲಿ ಘಟನೆ ನಡೆದಿದೆ. ಗೀತಾ ಈಶ್ವರಯ್ಯಾ ಆದಾರಪುರಮಠ (15), ರುದ್ರಯ್ಯಾ ಈಶ್ವರಯ್ಯಾ ಆದಾಪುರಮಠ (10) ಮೃತ ದುರ್ದೈವಿಗಳು.
40-50 ವರ್ಷಗಳಷ್ಟು ಹಳೆಯ ಮನೆಗೆ ಮಣ್ಣಿನ ಚಾವಣಿಯಾಗಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಮನೆ ಸೋರಿಕೆಯಾಗಿತ್ತು. ಈ ವೇಳೆ ಚಾವಣಿಗೆ ಮಣ್ಣು ಹಾಕಿ ತಟ್ಟಿ ಸರಿಮಾಡಿಕೊಂಡಿದ್ದರು. ಆದರೆ ಏಕಾಏಕಿ ಮನೆ ಚಾವಣಿ ಕುಸಿದಿದೆ. ಮನೆಯೊಳಗೆ ಇದ್ದ ಮಕ್ಕಳಿಬ್ಬರ ಮೇಲೆ ರಭಸವಾಗಿ ಮಣ್ಣು ಬಿದ್ದಿದೆ. ಆದರೆ ಈ ದುರ್ಘಟನೆ ನಡೆದಾಗ ಮನೆಯಲ್ಲಿ ಮಕ್ಕಳ ತಂದೆ-ತಾಯಿ ಇರಲಿಲ್ಲ.
ಮಕ್ಕಳ ಮೇಲೆ ಚಾವಣಿ ಬಿದ್ದ ಪರಿಣಾಮ ಹೊರಬರಲು ಆಗದೆ ಮಣ್ಣಲ್ಲಿ ಸಿಲುಕಿದ್ದು, ಕೂಡಲೇ ಸ್ಥಳೀಯರ ಸಹಾಯದಿಂದ ಮಕ್ಕಳನ್ನು ಹೊರತೆಗೆಯಲಾಯಿತು. ತಾಲ್ಲೂಕಾಸ್ಪತ್ರೆಗೆ ಸಾಗಿಸಲಾಗಿತ್ತು. ಆದರೂ ಮಕ್ಕಳಿಬ್ಬರು ಬದುಕುಳಿಯಲಿಲ್ಲ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಆಸ್ಪತ್ರೆಗೆ ಶಾಸಕ ವಿಜಯಾನಂದ ಕಾಶಪ್ಪನರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.