ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣ ಹಾಗೂ ಸಂತ್ರಸ್ತೆಯ ಅಪಹರಣ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಇಂದು ಮಧ್ಯಾಹ್ನ 2.45ಕ್ಕೆ ವಿಚಾರಣೆ ಮುಂದೂಡಿದೆ. ಪ್ರಕರಣ ಸಂಬಂಧ ಮಾಜಿ ಸಚಿವ ರೇವಣ್ಣ ಆಪ್ತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಬುಧವಾರ ಹೆಚ್ಡಿ ರೇವಣ್ಣ ಅವರ ಕಸ್ಟಡಿ ಅಂತ್ಯ ಆಗುವ ಹಿನ್ನೆಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಎಸ್ಐಟಿ ಕಸ್ಟಡಿಯಲ್ಲಿರುವ ರೇವಣ್ಣ ಜಾಮೀನಿಗೆ ಅವರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಕಸ್ಟಡಿಯಲ್ಲಿರುವ ವ್ಯಕ್ತಿಗೆ ಜಾಮೀನು ಕೊಡುವುದು ಹೇಗೆ ಅಂತಾ ನ್ಯಾಯಾಧೀಶರು ರೇವಣ್ಣ ಪರ ವಕೀಲರು ಪ್ರಶ್ನಿಸಿದ್ದಾರೆ. ಇದಕ್ಕೆ ಸುಪ್ರೀ ಕೋರ್ಟ್ ತೀರ್ಪು ಉಲ್ಲೇಖಿಸಿ ವಕೀಲರು ವಾದ ಮುಂದಿಟ್ಟಿದ್ದಾರೆ. ಆದರೂ ಈ ಬಗ್ಗೆ ಎಸ್ಐಟಿ ಪ್ರತಿಕ್ರಿಯಿಸಲಿ ಅಂತಾ ಎಸ್ಐಟಿಗೆ ನೋಟಿಸ್ ನೀಡಿ ವಿಚಾರಣೆಗೆಯನ್ನು ಮುಂದೂಡಲಾಗಿತ್ತು.
ಮಹಿಳೆ ಅಪಹರಣದಲ್ಲಿ ಎಸ್ಐಟಿ ವಶದಲ್ಲಿರುವ ರೇವಣ್ಣ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ರೇವಣ್ಣಗೆ ಬೇಲ್ ಸಿದುತ್ತಾ? ಮತ್ತೆ ಕಸ್ಟಡಿಗೆ ತೆಗೆದುಕೊಳ್ತಾರಾ? ಅಥವಾ ಜೈಲು ಪಾಲಾಗ್ತರಾ ಅನ್ನೋದು ಯಕ್ಷ ಪ್ರಶ್ನೆಯಾಗಿದೆ.