ಬಸ್ಸಿನಿಂದ ಜನರನ್ನು ಕೆಳಗಿಳಿಸಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ 23 ಜನರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಲೂಚಿಸ್ತಾನದಲ್ಲಿ ನಡೆದಿದೆ. ಆಕ್ರಮಣಕಾರರು ಅಂತರ-ಪ್ರಾಂತೀಯ ಬಸ್ಗಳು ಮತ್ತು ಟ್ರಕ್ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಪ್ರಯಾಣಿಕರನ್ನು ಕೆಳಗಿಳಿಸಿ ಗುರುತಿನ ಚೀಟಿ ಪರಿಶೀಲಿಸಿ ಗುಂಡಿನ ಸುರಿಮಳೆಗೈದಿದ್ದಾರೆ.
ರಾರಶಮ್ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಪುರುಷರು ಹೆದ್ದಾರಿಯನ್ನು ತಡೆದು, ವಾಹನಗಳನ್ನು ಅಡ್ಡಿಪಡಿಸಿದರು ಮತ್ತು ಪ್ರಯಾಣಿಕರನ್ನು ಕೆಳಗಿಳಿಸಿದ್ದರು. ಮೃತರೆಲ್ಲರೂ ಪಂಜಾಬ್ನ ನಿವಾಸಿಗಳು ಎಂದು ಗುರುತಿಸಲಾಗಿದೆ. ಹತ್ಯೆಯ ನಂತರ, ದಾಳಿಕೋರರು ಸ್ಥಳದಿಂದ ಪಲಾಯನ ಮಾಡುವ ಮೊದಲು ಹತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಹೆಚ್ಚಿನ ತನಿಖೆಗಾಗಿ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ದಾಳಿಯನ್ನು ಭಯೋತ್ಪಾದಕ ಕೃತ್ಯ ಎಂದು ಬಲೂಚಿಸ್ತಾನ ಮುಖ್ಯಮಂತ್ರಿ ಸರ್ಫರಾಜ್ ಬುಗ್ತಿ ಕರೆದಿದ್ದಾರೆ.