- ಸಿಎಂ ಸಿದ್ದರಾಮಯ್ಯ ಮುಂದೆಯೇ ಡಿಕೆಶಿ ಸಿಎಂ ಬೇಡಿಕೆ ಇಟ್ಟ ಸ್ವಾಮೀಜಿ
- ನೀವು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟು ಡಿ ಕೆ ಸಿಎಂ ಮಾಡಿ
ಮುಖ್ಯಮಂತ್ರಿಗಳಾಗಿ ಎಲ್ಲರೂ ಸಹ ಕೆಲಸ ಮಾಡಿದ್ದಾರೆ. ಡಿ. ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎಂದು ಸಿಎಂ ಸಮ್ಮುಖದಲ್ಲಿ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದಾರೆ.
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಸಿದ್ದರಾಮಯ್ಯನವರ ಮುಂದೆ ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.