- ಅಜಾಗ್ರತ ಸಿನಿಮಾ ಶೂಟಿಂಗ್ ಕಂಪ್ಲೀಟ್
- ನಿರ್ದೇಶಕ ಶಶಿಧರ್ ಅವರಿಗೆ ಕಾರು ಗಿಫ್ಟ್ ಕೊಟ್ಟ ರಾಧಿಕಾ ಕುಮಾರಸ್ವಾಮಿ
ರಾಧಿಕಾ ಕುಮಾರಸ್ವಾಮಿ ಮತ್ತು ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಅಭಿನಯದ ಅಜಾಗ್ರತ ಸಿನಿಮಾ ಶೂಟಿಂಗ್ ಕಂಪ್ಲೀಟ್ ಆಗಿದೆ. ಎಂ.ಶಶಿಧರ್ ನಿರ್ದೇಶನದ ಅಜಾಗ್ರತ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ” ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ. ಹಾಗಾಗಿ ಸಿನಿಮಾ ನಿರ್ಮಾಪಕ ರವಿರಾಜ್ ಹಾಗೂ ರಾಧಿಕಾ ಕುಮಾರಸ್ವಾಮಿ ಈ ಸಂದರ್ಭದಲ್ಲಿ ನಿರ್ದೇಶಕ ಶಶಿಧರ್ ಅವರಿಗೆ ದುಬಾರಿ ಕಾರು ಗಿಫ್ಟ್ ಕೊಟ್ಟಿದ್ದಾರೆ.
ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ. ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚ್ಯೂನರ್ ಕಾರನ್ನು ಉಡುಗೊರೆಯಾಗಿ ನೀಡುತ್ತೀದ್ದೇನೆ ಎಂದು ನಿರ್ಮಾಪಕ ರವಿರಾಜ್ ತಿಳಿಸಿದ್ದಾರೆ.
ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ನಾಯಕರಾಗಿ ನಟಿಸಿರುವ ಅಜಾಗ್ರತ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸಿದ್ದಾರೆ. ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಾವ್ ರಮೇಶ್, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ.