ಆನೇಕಲ್ : ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಕಾಲೇಜು ಹಾಸ್ಟಲ್ನಲ್ಲಿ ನೇಣಿಗೆ ಶರಣಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬೆಂಗಳೂರು ಕಾಲೇಜು ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿನಿ ಹರ್ಷಿತ ಮೃತ ದುರ್ದೈವಿ.
ಕಾಲೇಜಿನವರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆಡಳಿತ ಮಂಡಳಿ ಸಾಕಷ್ಟು ದಿನಗಳಿಂದ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಿದ್ದಾರೆ. ವಿದ್ಯಾರ್ಥಿನಿ ಸಾವು ಖಂಡಿಸಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಟಿ ಪರಿಶೀಲನೆ ನಡೆಸಿದರು.
ಬೆಂಗಳೂರು ಹೊರವಲಯ ಚಂದಾಪುರ ಸಮೀಪದ ಹೀಲಲಿಗೆಯಲ್ಲಿ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಹರ್ಷಿತ ಕಾಲೇಜು ಹಾಸ್ಟೆಲ್ನಲ್ಲಿ ಇದ್ದಳು. ನಿನ್ನೆ ಗುರುವಾರ ರಾತ್ರಿ ಹಾಸ್ಟೆಲ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆಯಾಗಿದ್ದಾಳೆ.