- ಸೋಮಣ್ಣ ಮಗನ ವಿರುದ್ಧ ಎಫ್ಐಆರ್
- ಅರುಣ ಸೋಮಣ್ಣ ಸೇರಿದಂತೆ ಮೂವರ ಮೇಲೆ ಕೇಸ್ ದಾಖಲು
ಕೇಂದ್ರ ಸಚಿವ ವಿ ಸೋಮಣ್ಣ ಪುತ್ರ ಸೇರಿ ಮೂವರ ಮೇಲೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಮಾಡಲಾಗಿದೆ. ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿ ವ್ಯವಹಾರದಲ್ಲಿ ದಂಪತಿಗೆ ವಂಚನೆ, ಜೀವ ಬೆದರಿಕೆ ಹಾಕಿರುವ ಗಂಭೀರ ಆರೋಪ ಕೇಳಿ ಬಂದಿದ್ದು, ವಿ ಸೋಮಣ್ಣ ಮಗ ಅರುಣ ಸೋಮಣ್ಣ ಜೀವನ್ ಕುಮಾರ್ ಮತ್ತು ಪ್ರಮೋದ್ ರಾವ್ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ಬೆಂಗಳೂರಿನ ಸಂಜಯ ನಗರದ ಎಇಸಿಎಸ್ ನಿವಾಸಿ ತೃಪ್ತಿ ಹೆಗಡೆ ಎಂಬುವವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 37ನೇ ಹೆಚ್ಚುವರಿ ಚೀಫ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ಮೇರೆಗೆ ಎಫ್ಐಆರ್ ದಾಖಲಾಗಿದೆ.