ಕರ್ನಾಟಕ ಮಹರ್ಷಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 94. 73 ಕೋಟಿ ಹಣ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾದ ಆರೋಪಕ್ಕೆ ಗುರಿಯಾಗಿರುವ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರು ಗುರುವಾರ ಸಂಜೆ 7 ಗಂಟೆಗೆ ಸಿಎಂ ಮನೆಗೆ ಭೇಟಿ ನೀಡಿ ರಾಜೀನಾಮೆ ನೀಡುತ್ತೇನೆ. ನನ್ನ ಆತ್ನಸಾಕ್ಷಿ, ಪಕ್ಷಕ್ಕೆ ಮುಜುಗರ ಆಗದಂತೆ ರಾಜೀನಾಮೆ ನೀಡುತ್ತೇನೆ ಎಂದರು.
ವಿಧಾನಸೌಧದಲ್ಲಿ ಸಂಜೆ ಸುದ್ದಿಗೋಷ್ಠಿ ನಡೆಸಿದ ಅವರು, ಸ್ವ – ಇಚ್ಛೆಯಿಂದ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದರು. ಸಚಿವ ನಾಗೇಂದ್ರ ಅವರನ್ನು ಬುಧವಾರ ರಾತ್ರಿ ತಮ್ಮ ನಿವಾಸ ಕಾವೇರಿ ಗೆ ಕರೆಯಿಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರು ಎಂದು ಗೊತ್ತಾಗಿತ್ತು.