- ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನಾಗೇಂದ್ರ ಹೆಸರು ಕೇಳಿ ಬಂದಿದೆ
- ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರ ಹೆಸರು ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ಸೂಚಿಸಿದ್ದಾರೆ.
ಹಗರಣ ಸಂಬಂಧ ಮೇ 30 ರಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ನಡೆಸಿದ್ದರು. ಸಭೆಯಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಗ್ಗೆ ಚರ್ಚೆ ನಡೆಯಿತು. ಸರ್ಕಾರಕ್ಕೆ ಮುಖಭಂಗವಾಗಬಾರದೆಂದು ಬಿ. ನಾಗೇಂದ್ರ ರಾಜೀನಾಮೆ ನೀಡುವುದು ಒಳಿತು. ತನಿಖೆ ಪೂರ್ಣವಾದ ಬಳಿಕ ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತೀರ್ಮಾನ ಕೈಗೊಂಡರು. ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ಖುದ್ದು ತಾವೇ ಹೇಳಿಕೆ ನೀಡಿ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ.