- ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ
- ವಾರೆಂಟ್ ಹೊರಡಿಸಲು ವಿಶೇಷ ನ್ಯಾಯಾಲಯದಿಂದ ಆದೇಶ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ವಾರೆಂಟ್ ಜಾರಿಯಾಗಿದೆ. ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಲು ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಇದರಿಂದಾಗಿ ಬಿಎಸ್ ಯಡಿಯೂರಪ್ಪ ಅವರಿಗೆ ಬಂಧನ ಭೀತಿ ಶುರುವಾಗಿದೆ.
ಮಾರ್ಚ್ 14 ರಂದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರೋ ದೂರು ದಾಖಲಾಗಿತ್ತು. ಬಿಎಸ್ವೈ ಮನೆಗೆ ಭೇಟಿ ನೀಡಿದ್ದ ಮಹಿಳೆ ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿರೋ ಆರೋಪ ಮಾಡಿ ಸದಾಶಿವನಗರದ ಪೊಲೀಸ್ ಸ್ಟೇಷನ್ನಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಬಿಎಸ್ವೈ ವಿಚಾರಣೆ ನಡೆಸಿದ್ದರು.. ಕಳೆದ 3 ತಿಂಗಳಿಂದ ಪ್ರಕರಣದಲ್ಲಿ ಯಾವುದೇ ಬದಲಾವಣೆ ಆಗದ ಹಿನ್ನೆಲೆಯಲ್ಲಿ ಬಾಲಕಿಯ ಅಣ್ಣ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಸಿಐಡಿ ಜೂನ್ 15 ರೊಳಗಾಗಿ ವಾರೆಂಟ್ ಸಲ್ಲಿಸಬೇಕಾಗಿತ್ತು. ಹೀಗಾಗಿ ಬಿಎಸ್ ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರ ವಿರುದ್ಧ ವಾರೆಂಟ್ ಹೊರಡಿಸಲಾಗಿದೆ.