- ನಾನು ಯಾರ ಮೇಲೆ ದೂರೋದಿಲ್ಲ. ಕಾಲವೇ ತೀರ್ಮಾನ ಮಾಡಲಿದೆ
- ಕುತಂತ್ರ ಮಾಡ್ತಿದವರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ
ಪೋಕ್ಸೋ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ನಾಲ್ಕು ದಿನಗಳ ಬಳಿಕ ತಮ್ಮ ನಿವಾಸಕ್ಕೆ ವಾಪಸ್ ಆಗಿದ್ದಾರೆ. ನಿನ್ನೆ ಬಿಎಸ್ ವೈ ಅವರಿಗೆ ಕೋರ್ಟ್ ಜಾಮೀನು ನೀಡಿ ರಿಲೀಫ್ ನೀಡಿತ್ತು. ಕೋರ್ಟ್ ಆದೇಶದ ಬೆನ್ನಲ್ಲೇ ಯಡಿಯೂರಪ್ಪ ಅವರು ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಬೆಂಗಳೂರಿಗೆ ಆಗಮಿಸಿದ ಬಳಿಕ ಮಾತನಾಡಿದ ಬಿಎಸ್ ಯಡಿಯೂರಪ್ಪ ನಿಗದಿತ ಕಾರ್ಯಕ್ರಮದ ಅಂಗವಾಗಿ ದೆಹಲಿಗೆ ಹೋಗಿದ್ದೆ. ಪೊಲೀಸರ ವಿಚಾರಣೆಗೆ ಜೂನ್ 17ಕ್ಕೆ ಬರುವುದಾಗಿ ನಾನು ಮೊದಲೇ ತಿಳಿಸಿದ್ದೆ. ಹೈಕೋರ್ಟ್ ಸಹ ತಡೆಯಾಜ್ಞೆ ನೀಡಿದೆ. ಸೋಮವಾರ ನಾನು ವಿಚಾರಣೆಗೆ ಹೋಗುತ್ತಿದ್ದೇನೆ. ಅನವಶ್ಯಕವಾಗಿ ಗೊಂದಲ ಉಂಟು ಮಾಡುವ ಕೆಲಸ ಮಾಡಿದ್ದರು. ನಾನು ಯಾರ ಮೇಲೆ ದೂರುವುದಿಲ್ಲ. ಕಾಲವೇ ಎಲ್ಲ ತೀರ್ಮಾನ ಮಾಡಲಿದೆ. ವಾಸ್ತವ ಏನು ಅಂತ ಜನರಿಗೆ ಗೊತ್ತಿದೆ. ಯಾರು ಕುತಂತ್ರ ಮಾಡ್ತಿದ್ದಾರೋ ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.