ದಲಿತರ ಹಣ ಗ್ಯಾರಂಟಿಗೆ ಬಳಕೆ ಮಾಡಿಕೊಂಡಿರುವ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗೆ ಎಸ್ಸಿಪಿ, ಟಿಎಸ್ಪಿ ಹಣ ಬಳಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. 24 ಸಾವಿರ ಕೋಟಿ ದಲಿತರ ಹಣ ಗ್ಯಾರಂಟಿಗೆ ತೆಗೆದುಕೊಂಡಿದ್ದಾರೆ, ದಲಿತರ ಅಭಿವೃದ್ಧಿ ಮಾಡೋದು ಬಿಟ್ಟು ಅವರಿಗೆ ಅನ್ಯಾಯ ಮಾಡಿದ್ದಾರೆ. ಈ ಬಗ್ಗೆ ಈ ಹಿಂದೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದೇವೆ. ಸದನದ ಒಳಗೂ ಹೋರಾಟ ಮಾಡುತ್ತೇವೆ ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ.