ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ಮುಂದುವರೆಸಿದೆ. ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿಯೂ ಟೀಕಾ ಪ್ರಹಾರ ಮುಂದುವರೆಸಿದೆ. ಒಲಿಂಪಿಕ್ಸ್ ಜೊತೆ ಹೋಲಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪ್ರಕಟಿಸಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯಗೆ ಭ್ರಷ್ಟಾಚಾರದಲ್ಲಿ ಚಿನ್ನದ ಪದಕ ದೊರೆಯಬಹುದು ಎಂದು ವ್ಯಂಗ್ಯವಾಡಿದೆ.
ಒಲಿಂಪಿಕ್ಸ್ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದಲ್ಲಿ ಭ್ರಷ್ಟಾಚಾರದ ಪಿತಾಮಹನಿಗೆ ಚಿನ್ನದ ಪದಕ ಖಚಿತ- ನಿಶ್ಚಿತ – ಖಂಡಿತ ಎಂದು ಸಿಎ ಸಿದ್ದರಾಮಯ್ಯ, ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಪೋಟೋವನ್ನು ಬಿಜೆಪಿ ಪೋಸ್ಟ್ ಮಾಡಿದೆ. ಇದರಲ್ಲಿ ಸಿದ್ದರಾಮಯ್ಯ ಚಿನ್ನದ ಪದಕ, ನಾಗೇಂದ್ರ ಬೆಳ್ಳಿ ಹಾಗೂ ದದ್ದಲ್ ಕಂಚಿನ ಒದಕ ಧರಿಸಿರುವ ಎಡಿಟೆಡ್ ಫೋಟೊ ಪ್ರಕಟಿಸಲಾಗಿದೆ.