- ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ
- ಬಿಜೆಪಿ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ
ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷರು ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೈಕಲ್ ಜಾಥಾ ಆಯೋಜನೆ ಮಾಡಲಾಗಿದ್ದು, ಬಿಜೆಪಿ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಸಲಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದು, ತೈಲ ಬೆಲೆ ಏರಿಸಿ ಲೂಟಿಗಿಳಿದ ಸರ್ಕಾರ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ.
ಸೈಕಲ್ ಜಾಥಾದಲ್ಲಿ ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ, ಛಲವಾದಿ ನಾರಾಯಣಸ್ವಾಮಿ, ಪಿ ರಾಜೀವ್, ಸಿ ಟಿ ರವಿ ಸೇರಿದಂತೆ ಇತರೆ ನಾಯಕರು ಭಾಗಿಯಾಗಿದ್ದಾರೆ. ಪ್ರತಿಭಟನೆಗಿಳಿದ ಬಿಜೆಪಿ ನಾಯಕರು, ಬಿ.ವೈ ವಿಜಯೇಂದ್ರ, ಸಿಟಿ ರವಿ ಛಲವಾದಿ ನಾರಾಯಣಸ್ವಾಮಿ, ಅಶ್ವತ್ಥ ನಾರಾಯಣ ಸೇರಿದಂತೆ ಬಿಜೆಪಿ ಕಾರ್ಯಕರ್ತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.