ರಾಜ್ಯದ ಆಹಾರ ಇಲಾಖೆ ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೊಸ ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರಿಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ಸದ್ಯ ಆಹಾರ ನಾಗರಿಕ ವೆಬ್ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಒಂದು ವರ್ಷದ ಬಳಿಕ ಆಹಾರ ಇಲಾಖೆ ಹೊಸ ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಒಪ್ಪಿಗೆ ನೀಡಿದೆ. ಹೀಗಾಗಿ ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿಸಲ್ಲಿಸಲು ಜನ ಮುಗಿಬೀಳುತ್ತಿದ್ದಾರೆ. ಬಿಪಿಎಲ್, ಎಪಿಎಲ್, ಕಾರ್ಡ್ಗೆ ಅರ್ಜಿ ಸಲ್ಲಿಕೆಗೆ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ ಅರ್ಜಿ ಸಲ್ಲಿಕೆ ಅವಕಾಶ ನೀಡಿದೆ. ಇದರ ಜೊತೆಗೆ ರೇಷನ್ ಕಾರ್ಡ್ಗಳ ತಿದ್ದುಪಡಿಗೂ ಅವಕಾಶ ನೀಡಲಾಗಿದೆ.
ಆಹಾರ ಇಲಾಖೆ ವಿರುದ್ಧ ಆಕ್ರೋಶ;
ಅರ್ಜಿ ಸಲ್ಲಿಕೆಗೆ ಬೆಂಗಳೂರು ಒನ್ ಸೆಂಟರ್ಗೆ ನಾಗರಿಕರು ಆಗಮಿಸುತ್ತಿದ್ದು. ವೆಬ್ಸೈಟ್ ಒಪನ್ ಆಗುತ್ತಿದೆ ಆದರೆ ಅರ್ಜಿ ಮಾತ್ರ ರವಾನೆಯಾಗುತ್ತಿಲ್ಲ. ಹೀಗಾಗಿ ಆಹಾರ ಇಲಾಖೆಯ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿದ್ದೇವೆ ಎಂದು ಹೇಳಿ ಜನರನ್ನ ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳು ಏನಯ ಮಾಡುತ್ತಿದ್ದಾರೆ? ಪರ್ಮಿಷನ್ ಕೊಟ್ಟಿದ್ದಾರೆ ಅಂತ ಎಸಿ ರೋಮ್ನಲ್ಲಿ ಸುಮ್ಮನೆ ಕುಳಿತುಕೊಂಡರೆ ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸುವುದು ಯಾರು? ತಿದ್ದಪಡಿಗೆ ಒಂದು ವಾರ ಅಲೆದಿದ್ದೇವೆ. ಇದೀಗ ಅರ್ಜಿ ಸಲ್ಲಿಸಲು ಅಲೆದಾಡುವ ಪರದಾಡುವ ಪರಿಸ್ಥಿತಿ ಎದುರಾಗಿದೆ. ನಮ್ಮ ಸಮಸ್ಯೆಗಳನ್ನು ಯಾರು ಆಲಿಸುತ್ತಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.