ನವೆಂಬರ್ 13ರಂದು ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ಪ್ರಚಾರ ನಡೆಸಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.
ಇದನ್ನು ಓದಿ:ಡಿಬಾಸ್ ರಿಲೀಸ್; ಕರ್ನಾಟಕದಲ್ಲಿ ಟ್ವಿಟ್ಟರ್ ಶೇಕ್.!
40 ಜನರ ಸ್ಟಾರ್ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವರು ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಹೆಚ್.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಚುನಾವಣಾ ಆಯೋಗಕ್ಕೂ ಪಟ್ಟಿಯನ್ನ ರವಾನೆ ಮಾಡಿದ್ದಾರೆ. ಆದ್ರೆ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ. ಜೆಡಿಎಸ್ ಸ್ಟಾರ್ ಕ್ಯಾಂಪೇನರ್ಗಳ ಪಟ್ಟಿಯಲ್ಲಿ ಶಾಸಕರು, ಮಾಜಿ ಶಾಸಕರು, ಮಾಜಿ, ಹಾಲಿ ಸಂಸದರು, ಹಿರಿಯ ನಾಯಕರು, ಮಾಜಿ, ಹಾಲಿ ಎಂಎಲ್ಸಿಗಳು ಸೇರಿ ಒಟ್ಟು 40 ಪ್ರಚಾರಕರು ಹೆಸರು ಇದೆ. ಆದರೆ ಪಕ್ಷದ ಹಿರಿಯ ನಾಯಕ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರ ಹೆಸರನ್ನು ಮಾತ್ರ ನಮೂದು ಮಾಡಿಲ್ಲ.
ಇದನ್ನು ಓದಿ:ಕೋರ್ಟ್ ಆದೇಶಕ್ಕೆ ಗೌರವ ಸೂಚಿಸಿದ ರೇಣುಕಾಸ್ವಾಮಿ ತಂದೆ!
ಇತ್ತೀಚೆಗೆ ಮುಡಾ ಪ್ರಕರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂಬ ಒತ್ತಾಯದ ವಿಚಾರಕ್ಕೆ ಸಂಬಂಧಿಸಿದಂತೆ ಜಿ.ಟಿ ದೇವೇಗೌಡರು ದಸರಾ ಉದ್ಘಾಟನಾ ವೇದಿಕೆಯಲ್ಲಿ ಮಾತನಾಡಿದ್ದರು. ಕುಮಾರಸ್ವಾಮಿ ವಿರುದ್ಧವೇ ವಾಗ್ದಾಳಿ ನಡೆಸಿದ್ದ ಜಿಟಿ ದೇವೇಗೌಡ ಅವರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆಗೆ ಸ್ಟಾರ್ ಪ್ರಚಾರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.