ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರಿಗೆ ಮತ್ತೆ 2 ದಿನ ಪೊಲೀಸ್ ಕಸ್ಟಡಿ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.
ಇಂದು ಸೂರಜ್ ರೇವಣ್ಣ ಪೊಲೀಸ್ ಕಸ್ಟಡಿ ಅವಧಿ ಕೊನೆಗೊಂಡಿತ್ತು. ಹೀಗಾಗಿ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.ಈ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂರಜ್ ರೇವಣ್ಣ ಅವರನ್ನು ಮತ್ತೆ 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.