- ರೇಣುಕಾಸ್ವಾಮಿಯನ್ನು ಹೀರೊ ಮಾಡುವುದು ಬಿಡಿ
- ನಿಮ್ಮ ಮೇಲಿರುವ ಪ್ರೀತಿ ಗೌರವ ಎಂದಿಗೂ ಕಮ್ಮಿ ಆಗುವುದಿಲ್ಲ
- ನಾನು ದರ್ಶನ್ ಪರ ಎಂದು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ಹೇಮಲತಾ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವಿತ್ರ ಗೌಡ ಸೇರಿದಂತೆ 17 ಜನ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಜುಲೈ 04ರವರೆಗೂ ಆರೋಪಿಗಳು ಜೈಲುವಾಸ ಅನುಭವಿಸಬೇಕಾಗಿದ್ದು, ಪ್ರಕರಣದ ಗಂಭೀರತೆಯ ಬಗ್ಗೆ ಹಾಗೂ ನಟ ದರ್ಶನ್ ಬಗ್ಗೆ ಕೆಲ ನಟ-ನಟಿಯರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಅಂದ್ಹಾಗೇ, ದರ್ಶನ್ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ನಿರೂಪಕಿ ಹೇಮಾಲತಾ ತಮ್ಮ ನಿಲುವನ್ನ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ರೇಣುಕಾಸ್ವಾಮಿಯನ್ನು ಹೀರೊ ಮಾಡುವುದು ಬಿಡಿ ಎಂದು ಹೇಮಲತಾ ಆಗ್ರಹಿಸಿದ್ದಾರೆ.
ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಇನ್ನು ಮಾತನಾಡದೇ ಇರಲು ನನ್ನಂದ ಸಾಧ್ಯವಿಲ್ಲ, ಸಾವಿರ ಜನ ಸಾವಿರ ಮಾತನಾಡಲಿ ಒಮ್ಮೆ ಬೆಳೆದ ಸ್ನೇಹಕ್ಕೆ ಕಡಲಿನಸ್ಟಿರುವ ಪ್ರೀತಿಗೆ ನಾವೆಲ್ಲರೂ ಋಣಿಗಳೇ.. ಸ್ನೇಹವೆಂಬ ಸಂಕೋಲೆಯಲಿ ಒಮ್ಮೆ ಸಿಕ್ಕಿಕೊಂಡರೆ ಕೊಂಡಿ ಕಳಚುವುದಿಲ್ಲ… ಅಂದಿಗೂ ಇಂದಿಗೂ ಎಂದೆಂದಿಗೂ ಮರೆಯುವುದಿಲ್ಲ, ಬಿಡುವುದಿಲ್ಲ, ಬಿಟ್ಟುಕೊಡುವುದಿಲ್ಲ” ಎಂದು ಹೇಮಲತಾ ಬರೆದುಕೊಂಡಿದ್ದಾರೆ.”ಈ ಘಟನೆಗೆ ಏನು ಹೇಳಬೇಕು ಎಂದು ತಿಳಿಯುತ್ತಿಲ್ಲ, ಕಾನೂನಿನ ಮುಖಾಂತರ ಅಂತ್ಯವನ್ನಾಡಿ ಎಲ್ಲಾ ಕಳಂಕವನ್ನು ತೊಳೆದುಕೊಂಡು ಹೊರಗೆ ಬನ್ನಿ. ನಿಮ್ಮ ಮೇಲಿರುವ ಪ್ರೀತಿ ಗೌರವ ಎಂದಿಗೂ ಕಮ್ಮಿ ಆಗುವುದಿಲ್ಲ. ದಯವಿಟ್ಟು ರೇಣುಕಾಸ್ವಾಮಿಯನ್ನು ಹೀರೊ ಮಾಡುವುದು ನಿಲ್ಲಿಸಿ. ಇದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಹೇಮಲತಾ ಪೋಸ್ಟ್ ಮಾಡಿದ್ದಾರೆ.