ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಜುಲೈ 15 ರಿಂದ ಜುಲೈ 26 ರವೆರೆಗೆ 10 ದಿನಗಳ ಕಾಲ ಉಭಯ ಸದನಗಳ ಮುಂಗಾರು ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದಾರೆ. ಅಧಿವೇಶನ ದಿನಾಂಕ ನಿಗದಿಯನ್ನ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಅವರು ಸಿಎಂ ವಿವೇಚನೆಗೆ ಬಿಟ್ಟಿದ್ದರು. ಅದರಂತೆ ದಿನಾಂಕ ನಿಗದಿ ಮಾಡಿ ರಾಜ್ಯಪಾಲರಿಗೆ ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದಾರೆ.