ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಅರಂಭವಾಗಿದ್ದು, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯುತ್ತಿದೆ.
ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗಿಯಾಗಿದ್ದಾರೆ.