- ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚಳ
- ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ
ನಂದಿನಿ ಹಾಲಿನ ಪ್ಯಾಕೇಟ್ ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ. ಅರ್ಧಲೀಟರ್ ಹಾಲಿನ ಪ್ಯಾಕೇಟ್ ನಲ್ಲಿ ಮುಂದೆ 550 ಎಂಎಲ್ ಹಾಲು ಹಾಗೂ ಲೀಟರ್ ಪ್ಯಾಕೇಟ್ ನಲ್ಲಿ 1,050 ಎಂಎಲ್ ಹಾಲು ಸಿಗಲಿದೆ.
ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್ ಸಂಸ್ಥೆ ಪ್ಯಾಕೇಟ್ ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.