ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳ ತನಿಖೆಯಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ಕೊಡಿ ಎನ್ನುವ ಬಗ್ಗೆ ಬಿಜೆಪಿಯವರಿಗೆ ಯಾವ ನೈತಿಕತೆ ಇದೆ. ನನಗೆ ಸಿಬಿಐ ಮೇಲೆ ನಂಬಿಕೆ ಇಲ್ಲ ಎಂದು ಹೇಳಲ್ಲ. ಹೆಣ್ಮಕ್ಕಳ ಮೇಲಿನ ದೌರ್ಜನ್ಯ ಕೇಸ್ನಲ್ಲಿ ದೇವರಾಜೇಗೌಡ ಬಂಧನವಾಗಿದೆ ಎಂದು ಹೇಳಿದ್ದಾರೆ.
ಈ ಹಿಂದೆ ಸಿಬಿಐಗೆ ಬಗ್ಗೆ ಬಿಜೆಪಿಯವರು ಏನು ಹೇಳಿದ್ದರು ಗೊತ್ತಾ? ಸಿನಿಐ ಅಂದ್ರೆ ಕರೆಪ್ಷನ್ ಬ್ಯುರೋ ಆಫ್ ಇನ್ವೆಸ್ಟಿಗೇಷನ್ ಎಂದಿದ್ದರು. ಬಿಜೆಪಿ ಸರ್ಕಾರ ಇದ್ದಾಗ ಎಷ್ಟೋ ಕೇಸ್ ಸಿಬಿಐಗೆ ಕೊಡಿ ಎಂದಿದ್ದೆವು. ಯಾವುದಾದರೂ ಒಂದು ಪ್ರಕರಣ ಸಿಬಿಐಗೆ ಕೊಟ್ಟಿದ್ರಾ? ಸಿಬಿಐಗೆ ಕೊಡುವಂತೆ ಆಗ್ರಹ ಮಾಡಲು ಬಿಜೆಪಿಯವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಜಾಬ್ದಾರಿಯಿಂದ ಮಾತನಾಡಲಿ. ಪರೇಶ್ ಮೆಸ್ತಾ ಕೇಸ್ ಸಿಬಿಐಗೆ ಕೊಟ್ಟೆವು, ಆ ಕೇಸ್ ಏನಾಯಿತು..? ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸಿಮರು. ಎಸ್ಐಟಿ ಸರಿಯಾದ ದಿಕ್ಕಿನಲ್ಲಿ ಪ್ರಕರಣ ತನಿಖೆ ನಡೆಸುತ್ತಿದೆ ಎಂದು ಹೇಳಿದ್ದಾರೆ.