ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ದಿನದಿಂದ ದಿನಕ್ಕೆ ಹಚ್ಚಾಗುತ್ತಿದ್ದು, ಕಂಪನಿಗಳ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅದಕ್ಕೆ ಸಂಬಂಧಿಸಿದಂತೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತದೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಮದ ಸಾಲ ಪಡೆದ ನಂತರ ಕಿರುಕುಳಕ್ಕೆ ಆತ್ನಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಅದರ ನಡುವೆ ಹಾವೇರಿ ಅದರ ನಡುವೆಯೇ ಹಾವೇರಿ ಮಹಿಳೆಯರು ಮಾಂಗಲ್ಯ ಉಳಿಸಿ ಅಭಿಯಾನ ಆರಂಭಿಸಿ ಮುಖ್ಯಮಂತ್ರಿಗಳಿಗೆ ಮಾಂಗಲ್ಯದ ಸರವನ್ನು ಕಳುಹಿಸಿ ದ್ದರು. ಹೀಗಾಗಿ ಮೈಕ್ರೋಫೈನಾನ್ ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿರುವುದನ್ನು ಮನಗಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶನಿವಾರ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವ ಕುಮಾರ್, ಗೃಹ ಸಚಿವ ಡಾ. ಜಿ.ಪರಮೇಶ್ವರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರುಪಾಲ್ಗೊಳ್ಳಲಿ ದ್ದಾರೆ. ಜತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ಚಾಮರಾಜನಗರ, ರಾಮನಗರ ಹಾಗೂ ನಂಜನಗೂಡಿನ ಕೆಲವೆಡೆ ಮೈಕ್ರೋಫೈನಾನ್ಸ್ ಕಂಪನಿಗಳ ಕಿರುಕುಳತಾಳಲಾರದೆಜನರು ಊರು ಬಿಟ್ಟು ಹೋಗಿದ್ದ ವರದಿಗಳು ಭಾರಿ ಚರ್ಚೆಗೆ ಕಾರಣವಾಗಿದ್ದವು.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ:https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc