ಬೆಂಗಳೂರು : ತಂದೆ, ತಾಯಿಯ ಜಗಳ ಬಿಡಿಸಲು ಹೋಗಿ ತಂದೆಯಿಂದಲೇ ಕೊಲೆಯಾಗಿರುವ ಘಟನೆ ಬೆಂಗಳೂರಿನ ಜರಗನಹಳ್ಳಿಯಲ್ಲಿ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಮಗ. ಇನ್ಫೋಸಿಸ್ ಕಂಪನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದ.
ಮೃತನ ಅಜ್ಜಿಯನ್ನು ನೋಡಿಕೊಳ್ಳುವ ವಿಚಾರಕ್ಕೆ ತಂದೆ, ತಾಯಿ ನಡುವೆ ಆಗಾಗ ಜಗಳ ಆಗ್ತಾ ಇತ್ತು. ಇದೇ ಜಗಳ ಅತಿರೇಕಕ್ಕೆ ಹೋಗಿ ಈ ಘಟನೆ ನಡೆದಿದೆ. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ತಂದೆ ಅಡುಗೆ ಮನೆಯಲ್ಲಿದ್ದ ಚಾಕು ತಂದು ಇರಿದಿದ್ದಾನೆ. ನಂತರ ಆಸ್ಪತ್ರೆಗೆ ಹೋಗೋ ಮಾರ್ಗ ಮಧ್ಯೆ ಯಶವಂತ್ ಸಾವನ್ನಪ್ಪಿದ್ದಾನೆ. ಆರೋಪಿ ಬಸವರಾಜುನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.