ಬೆಂಗಳೂರು: ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 3 ಮನೆಗಳಿಗೆ ಬೆಂಕಿ ತಗುಲಿದ್ದು, ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಘಟನೆ ಡಿಜೆ ಹಳ್ಳಿಯ ಆನಂದ್ ಥಿಯೇಟರ್ ಬಳಿ ನಡೆದಿದೆ.
ಶನಿವಾರ ಬೆಳಗ್ಗೆ 11:30ರ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಪತಿ ನಾಜೀರ್, ಪತ್ನಿ ಕುಲ್ಸುಮ್ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಜೀರ್ ಪಾನಿಪುರಿ ವ್ಯಾಪಾರ ಮಾಡಿಕೊಂಡಿದ್ದರು. ಸ್ಫೋಟದ ತೀವ್ರತೆಗೆ ಮೂರೂ ಮನೆಗಳು ಪುಡಿಪುಡಿಯಾಗಿವೆ.
ರೆಗ್ಯುಲೇಟರ್ ಆನ್ ಆಗಿದ್ದರಿಂದ ಗ್ಯಾಸ್ ಲೀಕೇಜ್ ಆಗಿದೆ. ರೆಗ್ಯುಲೇಟರ್ 2016ರಲ್ಲೇ ಡೇಟ್ ಬಾರ್ ಆಗಿದೆ. ಅದರಿಂದಲೇ ಗ್ಯಾಸ್ ಲೀಕೇಜ್ ಆಗಿ ಮನೆ ತುಂಬ ಆವರಿಸಿದೆ. ಶನಿವಾರ ಬೆಳಗ್ಗೆ 11:30ಕ್ಕೆ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಡಿಜೆ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.