ಕೊಲೆ ಆರೋಪಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿಕೊಂಡಿದ್ದಾರೆ ಎಂಬ ಆರೋಪಕ್ಕೆ ಅಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದಾರೆ.
ದರ್ಶನ್ ಬಳ್ಳಾರಿಗೆ ಬರೋದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಅದು ಪೊಲೀಸ್ ಇಲಾಖೆಯ ತೀರ್ಮಾನ. ಜೈಲಿನಲ್ಲಿ ಟೀ-ಕಪ್ ಹಿಡಿದು, ಸಿಗರೇಟ್ ಸೇದುತ್ತಿದ್ದ ಫೋಟೊ ವೈರಲ್ ಆಗಿತ್ತು. ಅದು ಮಾಧ್ಯಮಗಳಲ್ಲಿ ಪ್ರಸಾರವಾದ ಮೇಲೆ ಶಿಫ್ಟ್ ಮಾಡಲಾಗಿದೆ. ನಾನು ಜಿಲ್ಲಾ ಉಸ್ತುವಾರಿ ಆಗಿರಬಹುದು. ಆದರೆ ನಾನು ಡಿಜಿ ಅಲ್ಲ. ನಾನು ಬರೀ ಜಿಲ್ಲಾ ಉಸ್ತುವಾರಿ ಮಂತ್ರಿ ಅನ್ನೋ ಮೂಲಕ ತಮಗೆ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ದರ್ಶನ್ಗೆ ರಾಜಾತಿಥ್ಯ ಸಿಗ್ತಿದೆ ಎಂಬ ಆರೋಪ ಇತ್ತು. ಅದಕ್ಕೆ ಸಾಕ್ಷಿ ಎನ್ನುವಂತೆ ಕೆಲವು ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿತ್ತು. ಈ ವಿಚಾರ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಬುಧವಾರ ಶಿಫ್ಟ್ ಮಾಡಲಾಗಿದೆ.