- ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಮಹತ್ವದ ಸಭೆ
- ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ
ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಈಗಾಗಲೇ ಸಿದ್ದವಾಗಿರೋ ಕಾಂಗ್ರೆಸ್ ಸರ್ಕಾರ ಇಂದು ಮಹತ್ವದ ಸಭೆ ನಡೆಸಿದೆ. ಕ್ವಿನ್ಸ್ ರೋಡ್ ನ ಭಾರತ ಜೋಡೋ ಭವನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿ, ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಹೌದು ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಮಾಜಿ ಮೇಯರ್ ಗಳು, ಉಪಮೇಯರ್ ಗಳು, ಕಾಂಗ್ರೆಸ್ ಮುಖಂಡರ ಸಭೆಯನ್ನು ನಡೆಸಿ ನಾವು ಚುನಾವಣೆಗೆ ಸಿದ್ಧರಾಗಿದ್ದೇವೆ ಎನ್ನುವ ಸಂದೇಶ ರವಾನೆ ಮಾಡಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷರಾದ ಡಾ. ಜಿ ಸಿ ಚಂದ್ರಶೇಖರ್, ಮಂಜುನಾಥ್ ಭಂಡಾರಿ, ಮಾಜಿ ಮೇಯರ್ ಗಳಾದ ಪಿ ಆರ್ ರಮೇಶ್, ಪದ್ಮಾವತಿ, ಸಂಪತ್ ರಾಜ್ ಮತ್ತಿತರರು ಭಾಗವಹಿಸಿದ್ದರು.