ಬೆಂಗಳೂರು: 2024ರ ಸಾಲಿನ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಫರ್ಸ್ ಆಗಿ ಹೊರ ಹೊಮ್ಮಿದ ವಿದ್ಯಾರ್ಥಿಗಳಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರ್ಜರಿ ಗಿಫ್ಟ್ ನೀಡಿದ್ದಾರೆ.
ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್ ಅವರನ್ನು ಡಿ ಕೆ ಶಿವಕುಮಾರ್ ಅವರು, ಭೇಟಿಯಾಗಿ ಸನ್ಮಾನಿಸಿ ಗೌರವಿಸಿದ್ದಾರೆ.
ಅಲ್ಲದೇ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಂಕಿತಾಗೆ 5 ಲಕ್ಷ ರೂ., ನವನೀತ್ಗೆ 2 ಲಕ್ಷ ರೂ. ಚೆಕ್ ವಿತರಿಸಿ ಶುಭ ಹಾರೈಸಿದರು.