- ‘ನಾಡಪ್ರಭು ಕೆಂಪೇಗೌಡ’ ಪೋಸ್ಟರ್ ಬಿಡುಗಡೆ
- ಕೆಂಪೇಗೌಡ ಪೋಸ್ಟರ್ ಶೇರ್ ಮಾಡಿದ ಡಿಸಿಎಂ ಡಿಕೆಶಿ
ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಸಿನಿಮಾ ಸೆಟ್ಟೇರಲು ಸಜ್ಜಾಗಿದ್ದು, ಬಹುನಿರೀಕ್ಷಿತ ಐತಿಹಾಸಿಕ ಚಿತ್ರ ‘ನಾಡಪ್ರಭು ಕೆಂಪೇಗೌಡ’ ಇದೀಗ ತನ್ನ ಮೊದಲ ಪೋಸ್ಟರ್ ಬಿಡುಗಡೆ ಮಾಡಿ ಭಾರೀ ಸದ್ದು ಮಾಡುತ್ತಿದೆ. ಡಾಲಿ ಧನಂಜಯ್ ಅವರು ನಾಡಪ್ರಭು ಕೆಂಪೇಗೌಡ ಪಾತ್ರದಲ್ಲಿ ನಟಿಸಲಿದ್ದಾರೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಕೆಂಪೇಗೌಡ ಪೋಸ್ಟರ್ ಅನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ನಾಡಪ್ರಭು ಕೆಂಪೇಗೌಡರ ಬದುಕು, ಸಾಧನೆ ಸಿನಿಮಾ ಆಗಿ ತೆರೆಗೆ ಬರುತ್ತಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆ. ಬೆಂಗಳೂರು ಇಂದು ವಿಶ್ವದ ಅಗ್ರಗಣ್ಯ ನಗರವಾಗಿ ರೂಪುಗೊಳ್ಳಲು ಕಾರಣಕರ್ತರು ಅವರು. ಕೆಂಪೇಗೌಡರು ಒಂದು ಜಿಲ್ಲೆ ಅಥವಾ ಒಂದು ರಾಜ್ಯಕ್ಕೆ ಸೀಮಿತರಾದವರಲ್ಲ, ಅವರ ಸಾಧನೆ ಇಡೀ ವಿಶ್ವಕ್ಕೆ ಮಾದರಿ. ಈ ಚಿತ್ರವು ಶತದಿನ ಕಾಣಲಿ. ನಿರ್ದೇಶಕರಾದ ಶ್ರೀ ಟಿ.ಎಸ್. ನಾಗಾಭರಣ ಹಾಗೂ ನಟ Dhananjaya ಅವರಿಗೆ ನನ್ನ ಶುಭ ಹಾರೈಕೆಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.