- ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟ
- ಡಾ. ಸಿಎನ್ ಮಂಜುನಾಥ್ ಗೆಲುವಿಗೆ ಹರಕೆ ಹೊತ್ತ ಸುಧಾಮುರ್ತಿ
ಕರ್ನಾಟಕದಲ್ಲಿ ಈಗಾಗಲೇ ಲೋಕಸಭಾ ಚುನಾವಣೇ ಮುಗಿದಿದ್ದು, ಜೂನ್ 4 ರಂದು ಫಲಿತಾಂಶ ಹೊರಬೀಳಲಿದೆ. ಆದರೆ ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್ ಜೆಡಿಎಸ್ ಮತ್ತು ಬಿಜೆಪಿ ನಾಯಕರಲ್ಲಿ ಸೋಲು ಗೆಲುವಿನ ಲೆಕ್ಕಚಾರ ಗರಿಗೆದರಿದೆ. ತಮ್ಮ ಅಭ್ಯರ್ಥಿ ಗೆಲ್ಲಲಿ ಎಂದು ಕೆಲವರು ದೇವರಿಗೆ ಹರಕೆ ಹೊತ್ತಿಕೊಂಡಿದ್ದಾರೆ. ಅದರಂತೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಖ್ಯಾತ ಹೃದ್ರೋಗ ತಜ್ಞ ಡಾ. ಸಿಎನ್ ಮಂಜುನಾಥ್ ಅವರ ಗೆಲುವಿಗೆ ರಾಜ್ಯಸಭಾ ಸದಸ್ಯೆ, ಇನ್ಫೋಸಿಸ್ ಸಹ ಸಂಸ್ಥಾಪಕಿ ಸುಧಾಮೂರ್ತಿ ಅವರು ಕೂಡ ಹರಿಕೆ ಹೊತ್ತುಕೊಂಡಿದ್ದಾರೆ. ಇದನ್ನು ಸ್ವತಃ ಡಾ. ಮಂಜುನಾಥ್ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ.
ಡಾ. ಸಿಎನ್ ಮಂಜುನಾಥ್ ಅವರು ಗೆದ್ದರೆ ಮಂತ್ರಾಲಯದಿಂದ ಸುಮಾರು 6 ಕಿಲೋ ಮೀಟರ್ ಇರುವ ಒಂದು ಸ್ಥಳದಿಂದ ಕಾಲ್ನಡಿಗೆ ಮೂಲಕ ಹೋಗಿ ರಾಯರ ಪಾದ ಪೂಜೆ ಮಾಡುತ್ತೇನೆ ಎಂದು ಸುಧಾಮೂರ್ತಿ ಹರಿಕೆ ಹೊತ್ತಿದ್ದಾರೆ. ಚುನಾವಣೆ ಮುಗಿದ ಬಳಿಕ ಡಾ ಮಂಜುನಾಥ್ ಅವರ ಮನೆಗೆ ಭೇಟಿ ನೀಡಿದ್ದ ವೇಲೆ ಸುಧಾಮೂರ್ತಿ ಹೇಳಿದ್ದಾರೆ. ಇದೀಗ ಡಾ. ಮಂಜುನಾಥ್ ಅವರೇ ಕಾರ್ಯಕ್ರಮವೊಂದರಲ್ಲಿ ಇದನ್ನು ಹಂಚಿಕೊಂಡಿದ್ದಾರೆ.