ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರ ಜನುಮ ದಿನದ ಸಂಭ್ರಮಾಚರಣೆಯನ್ನು ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸದಲ್ಲಿ ಡಾ.ಆನಂದಕುಮಾರ್ ರವರ ಅಭಿಮಾನಿ ಬಳಗದ ವತಿಯಿಂದ ಅದ್ದೂರಿಯಾಗಿ ಆಚರಿಸಿಕೊಂಡರು. ಕೆಪಿಸಿಸಿ ಕಾರ್ಯದರ್ಶಿಗಳು ಕೆಸಿಡಿಸಿ ಮಾಜಿ ಅಧ್ಯಕ್ಷರು ಆದ ಡಾ. ಆನಂದಕುಮಾರ್ ಅವರು ಈ ಸಂದರ್ಭದಲ್ಲಿ ಡಾ ಜಿ ಪರಮೇಶ್ವರ ಅವರಿಗೆ ಮೈಸೂರು ಪೇಠ ತೊಡಿಸಿ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಿಷ್ಠಾವಂತ ಕಾಂಗ್ರೆಸ್ ಕಟ್ಟಾಳು ನಮ್ಮೆಲ್ಲರ ನೆಚ್ಚಿನ ನಾಯಕರಾದ ಜಿ ಪರಮೇಶ್ವರ ಅವರಿಗೆ ಆಯುರಾರೋಗ್ಯ ವೃದ್ದಿಸಲಿ, ರಾಜಕೀಯದಲ್ಲಿ ಮತ್ತಷ್ಟು ಉನ್ನತ ಸ್ಥಾನಮಾನಗಳುದೊರೆಯಲಿ ಎಂಬುದು ನಮ್ಮೆಲ್ಲರ ಆಶಯವಾಗಿದೆ ಎಂದರು. ಪರಮೇಶ್ವರವರ ಅಭಿಮಾನಿಗಳು ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಪಾಲ್ಗೊಂಡಿದ್ದರು. ಪರಮೇಶ್ವರ್ ಅವರ ಹುಟ್ಟು ಹಬ್ಬಕ್ಕೆ ಅಭಿಮಾನಿಗಳು ಸಚಿವರ ಜನುಮ ದಿನದ ಶುಭ ಕೋರಿದರು.