ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬುಧವಾರ ನಡೆದ ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಆಶೀರ್ವದಿಸಿದರು.
ಸಚಿವ ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ಡಾ ಎಂ ಸಿ ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ಅವರು ಸೇರಿ ಹಲವರು ಉಪಸ್ಥಿತರಿದ್ದರು.