ಬೆಂಗಳೂರು : ಮತಯಾಚನೆ ವೇಳೆ ಬೆದರಿಕೆ ಆರೋಪದ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಆರ್ಆರ್ ನಗರ ಅಪಾರ್ಟ್ಮೆಂಟ್ವೊಂದರಲ್ಲಿ ಮತಯಾಚನೆ ವೇಳೆ ಡಿಕೆಶಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮಾಹಿತಿ ನೀಡಿತ್ತು. ಇದರ ಬೆನ್ನಲ್ಲೇ ಮಾಹಿತಿ ಪಡೆದು ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ಡಿಕೆ ಶಿವಕುಮಾರ್ ಮತಯಾಚನೆ ಮಾಡಿದ್ದರು. ಈ ವೇಳೆ ಬೆದರಿಕೆ ಹಾಕಿದ್ದ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆ ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬಳಸಿರೋ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.