- ಇಂದಿನಿಂದ ಹೊಸ ಕಾನೂನು ಜಾರಿಯಾಗುತ್ತಿದೆ
- ಕಾನೂನು ಜಾರಿ ಬಗ್ಗೆ ಪೊಲೀಸರಿಗೆ ತರಬೇತಿ ನೀಡಿದ್ದೇವೆ
ರಾಜ್ಯದಲ್ಲಿ ಇಂದಿನಿಂದ ಹೊದ ಕಾನೂನು ಜಾರಿಯಾಗುತ್ತಿದೆ. ಕಾನ್ಸ್ಟೇಬಲ್ನಿಂದ ಹಿಡಿದು ಅಧಿಕಾರಿಗಳವರೆಗೂ ಹೊಸ ಅಪರಾಧ ಕಾನೂನಿನ ಬಗ್ಗೆ ತರಬೇತಿ ನೀಡಿದ್ದೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಇಂದಿನಿಂದ 3 ದೇಶಿ ಕಾನೂನು ಜಾರಿ ಆಗುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಪರಮೇಶ್ವರ್ ಅವರು, ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ಕೊಟ್ಟಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಅಪ್ಲಿಕೇಶನ್ ಸಿದ್ದಪಡಿಸಿದ್ದೇವೆ. ಪೊಲೀಸರಿಗೆ ಹೊಂದಾಣೀಕೆ ಆಗುವವರೆಗೂ ಈ ಅಪ್ಲಿಕೇಶನ್ ನೋಡಿಕೊಂಡು ಕೆಲಸ ಮಾಡಬಹುದು ಎಂದರು.