ಬೆಂಗಳೂರು: ಅಕ್ಟೋಬರ್ 2 ರಂದು ನಾಳೆ ಗಾಂಧಿ ಜಯಂತಿ ಪ್ರಯುಕ್ತ ಮಾಂಸರಹಿತ ದಿನ ಎಂದು ಘೋಷಿಸಿದ್ದಾರೆ. ರಾಜ್ಯಾದ್ಯಂತ ಯಾವುದೇ ಸ್ಥಳದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾತ್ಮ ಗಾಂಧಿಜೀಯವರ ಜನ್ಮದಿನದ ಭಾಗವಾಗಿ ಬಿಬಿಎಂಪಿ ಈಗಾಗಲೇ ಎಲ್ಲಡೆ ಮಾಂಸ ಮಾರಾಟ ಹಾಗೂ ಪ್ರಾಣಿವಧೆಯನ್ನು ನಿಷೇಧ ಮಾಡಿದೆ. ಈ ಬಗ್ಗೆ ಬಿಬಿಎಂಪಿ ಎಕ್ಸ್ ಖಾತೆ ಮೂಲಕ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 02-10-2024 ಬುಧವಾರದಂದು ಗಾಂಧಿ ಜಯಂತಿ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ ಎಂದು ತಿಳಿಸಿದೆ.