- ಸಿಲಿಕಾನ್ ಸಿಟಿಯಲ್ಲಿ ಪುಂಡರ ಹಾವಳಿ
- ಯವತಿಗೆ ಇಬ್ಬರು ಮುಸ್ಲಿಂ ಯುವಕರು ಅವಾಚ್ಯವಾಗಿ ನಿಂದಿಸಿ ಕಿರುಕುಳ
- ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹ
ಸಿಲಿಕಾನ್ ಸಿಟಿಯಲ್ಲಿ ಪುಂಡರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಡ ಹಗಲೇ ರಸ್ತೆಯ ಪಕ್ಕ ನಿಂತಿದ್ದ ಯವತಿಗೆ ಇಬ್ಬರು ಮುಸ್ಲಿಂ ಯುವಕರು ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡಿದ ಘಟನೆ ಹಲವರನ್ನು ಬೆಚ್ಚಿ ಬೀಳಿಸಿದೆ. ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ರಸ್ತೆ ಬದಿ ಸ್ಕೂಟಿ ನಿಲ್ಲಿಸಿಕೊಂಡು ನಿಂತಿದ್ದ ಯುವತಿ ಬಳಿಗೆ ಬಂದ ಸ್ಕೂಟರ್ನಲ್ಲಿದ್ದ ಇಬ್ಬರು ಯುವಕರು ಹಿಂದಿಯಲ್ಲಿ ನಿಂದಿಸಿದ್ದಾರೆ. ಇದು ಬಿಟಿಎಂ ಲೇಔಟ್ನಲ್ಲಿ ನಡೆದ ಘಟನೆ ಎನ್ನಲಾಗಿದೆ. ಮಹಿಳೆಯರ ಸುರಕ್ಷತೆ ಬಗ್ಗೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.