ಬೆಂಗಳೂರು: ಹಾಸನ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುವ ಭರದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಗೌರವಕ್ಕೆ ಧಕ್ಕೆ ಉಂಟಾಗಿದೆ. ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಪಕ್ಷವು ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.
ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಕೆ.ಟಿ.ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ಅವರ ನೇತೃತ್ವದ ನಿಯೋಗ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದೆ.