- ಹೆಚ್.ಡಿ.ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದ ಹೆಚ್.ಡಿ.ಕುಮಾರಸ್ವಾಮಿ
- ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ ನೇರವಾಗಿ ಆರೋಪಿಸಿದರು.
- ಆಡಿಯೋ ಮೂಲಕ ಸಿಕ್ಕಿಬಿದ್ದ ದೊಡ್ಡ ತಿಮಿಂಗಲವನ್ನು ಬಿಟ್ಟು ದೇವರಾಜೇಗೌಡರನ್ನು ಬಂಧನ ಮಾಡಿದ್ದಾರೆ!
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇದೆಲ್ಲದರ ಹಿಂದೆ ದೊಡ್ಡ ತಿಮಿಂಗಿಲವೇ ಇದೆ ಎಂದು ಗುಡುಗಿದರು.
ಬೆಂಗಳೂರಿನಲಲಿ ಮಾತನಾಡಿದ ಅವರು, ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ ನೇರವಾಗಿ ಆರೋಪಿಸಿದರು. ವಕೀಲರಾದ ದೇವರಾಜೇಗೌಡರನ್ನು ಈಗ ಒಂದು ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಿದ್ದು ಯಾಕೆ? ಒಂದು ತಿಂಗಳಿನಿಂದ ಏನೆಲ್ಲಾ ಬೆಳವಣಿಗೆ ಆಯಿತು? ಆಡಿಯೋ ಮೂಲಕ ಸಿಕ್ಕಿಬಿದ್ದ ದೊಡ್ಡ ತಿಮಿಂಗಲವನ್ನು ಬಿಟ್ಟು ದೇವರಾಜೇಗೌಡರನ್ನು ಬಂಧನ ಮಾಡಿದ್ದಾರೆ! ಎಂದು ಅವರು ಕಿಡಿಕಾರಿದರು.
ವಿಡಿಯೋದಲ್ಲಿ ಬಂದಂತಹ ಮಹಿಳೆಯರ ಕುಟುಂಬಗಳ ಬಗ್ಗೆ ಸರ್ಕಾರಕ್ಕೆ ಅನುಕಂಪ ಎನ್ನುವುದು ಇದೆಯಾ? ಈ ಪ್ರಕರಣಕ್ಕೆ ಸಂಬಂಧಿಸಿ ನಾನು ಯಾರನ್ನೂ ವಹಿಸಿಕೊಳ್ಳುವ ಪ್ರಶ್ನೆ ಇಲ್ಲ. ಮಾಹಿತಿ ತಂತ್ರಜ್ಞಾನದ ಈ ಕಾಲದಲ್ಲಿ ಅಪರಾಧಿ, ನಿರಪರಾಧಿ ಆಗುತ್ತಾನೆ. ಸರ್ಕಾರಕ್ಕೆ ಬದ್ಧತೆ ಇದ್ದರೆ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಲಿ. ಅದನ್ನು ಬಿಟ್ಟು ರೇವಣ್ಣ ಸುತ್ತ ತನಿಖೆ ಗಿರಕಿ ಹೊಡೆಯುವ ಅಗತ್ಯವಿಲ್ಲ ಎಂದರು.
ಕುಮಾರಸ್ವಾಮಿ ಅವರು ರೇವಣ್ಣ ಕುಟುಂಬವನ್ನು ಮುಗಿಸಲು ನೋಡುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಾನು ನ್ಯಾಯದ ಪರ ಇದ್ದೇನೆ. ನೊಂದ ಮಹಿಳೆಯರ ಪರ ಇದ್ದೇನೆ ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದರು.