ಕೇಂದ್ರದಲ್ಲಿ ನರೇಂದ್ರ ಮೋದಿಯವರು ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ಎರಡು ಪ್ರಮುಖ ಇಲಾಖೆಗಳನ್ನ ನಡೆಸಬೇಕಿದೆ. ನನ್ನ ಅನುಪಸ್ಥಿತಿಯಲ್ಲಿ ಪಕ್ಷ ಸಂಘಟನೆ ಹಿನ್ನಡೆ ಆಗದಂತೆ ಎಲ್ಲ ನಾಯಕರು ಸಾಮೂಹಿಕ ನಾಯಕತ್ವ ತೆಗೆದುಕೊಂಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಹೆಚ್ಚಿನ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು. ನಮ್ಮ ಸಲಹೆಗಳನ್ನು ಕಾರ್ಯಗತಗೊಳಿಸಲು ನಿಖಿಲ್ ಸಕ್ರಿಯವಾಗಿ ಇರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.