ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಹೆಚ್ಚಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೂಡಲೇ ಟಾಸ್ಕ್ಫೋರ್ಸ್ ರಚಿಸುವಂತೆ ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ತೀವ್ರ ಮಳೆಯಿಂದ ತೊಂದರೆಗೆ ಒಳಗಾಗಿರುವ ಗ್ರಾಮಗಳನ್ನು ಸರ್ಕಾರ ಗುರುತಿಸಿದೆ. 27 ಜಿಲ್ಲೆಗಳ 177 ತಾಲೂಕುಗಳ 1,247 ಗ್ರಾಮ ಪಂಚಾಯ್ತಿಗಳಲ್ಲಿ ಅತಿವೃಷ್ಠಿಯಾಗಿರುವ ಬಗ್ಗೆ ವರದಿಯಾಗಿದೆ. ಅತಿವೃಷ್ಠಿಯಾಗಿರುವ ಕಡೆ ಕೂಡಲೆ ನೋಡೆಲ್ ಅಧಿಕಾರಿಗಳನ್ನು ನೇಮಕಮಾಡಿ, ನೆರೆಗೆ ಸಿಲುಕಿರುವವರನ್ನು ರಕ್ಷಿಸಲು, ಪ್ರಾಣ ಹಾನಿ ತಪ್ಪಿಸಲು ಮೊದಲ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎನ್ನಲಾಗಿದೆ. ಅಗತ್ಯ ಬಿದ್ದಲ್ಲಿ ನೆರೆ ಶಿಬಿರಗಳನ್ನು ಸ್ಥಾಪಿಸಿ ಸಂತ್ರಸ್ತರಿಗೆ ನೆರವಾಗಿ, ಸೂಕ್ತ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಸಿಎಂ ಸೂಚಿಸಿದ್ದಾರೆ ಎಂದು ವರದಿಯಾಗಿದೆ.